ವಿಟ್ಲ: `ಮಕ್ಖಳ ಪಠ್ಯೇತರ ಕ್ರೀಯಾತ್ಮಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಿ. ಪ್ರತೀ ಮಗುವಿನಲ್ಲೂ ವೈವಿದ್ಯಮಯ ಪ್ರತಿಭೆ ಇರುತ್ತದೆ. ಸರ್ಕಾರಿ ಶಾಲೆಗಳಲ್ಲಿ ಆಪ್ರತಿಭೆಗಳನ್ನು ಹುಡುಕಿ ಪ್ರೋತ್ಸಾಹಿದಾಗ ಅವರು ಖಾಸಗಿ ಶಾಲಾ ವಿದ್ಯಾರ್ಥಿಗಳೊಡನೆ ಸ್ಪರ್ಧಿಸಲು ಸಾಧ್ಯ.’ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರೀ ಕೊಡಂದೂರು ಹೇಳಿದರು. ಅವರು ಪಡಿಬಾಗಿಲಿನ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಮಕ್ಕಳ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತಾಡಿದರು.
`ಇಂದಿನ ಮಕ್ಕಳೇ ಇಂದಿನ ಜನಾಂಗ. ಅವರ ಅಭಿವೃದ್ಧಿ ಆಗಬೇಕಾದರೆ ಶಿಕ್ಷಣ ವ್ಯವಸ್ಥೆಯ ಆಧಾರ ಸ್ಥಂಭಗಳಾದ ಶಿಕ್ಷಕರು, ರಕ್ಷಕರು, ವಿದ್ಯಾರ್ಥಿಗಳು ಮತ್ತು ಶಾಲಾಭಿವೃದ್ಧಿ ಸಮಿತಿಯವರು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ಶಿಕ್ಷಣ ಸಂಯೋಜಕಿ ಪುಷ್ಪಾ ಹೇಳಿದರು. ವಾರ್ಷಿಕ ಸಂಚಿಕೆ `ಚಿಗುರು’ ಬಿಡುಗಡೆಗೊಳಿಸಿ ಹೇಳಿದರು.
ಸಭಾಧ್ಯಕ್ಷತೆ ವಹಿಸಿದ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ ಧ್ವಜಾರೋಹಣ ನೆರವೇರಿಸಿದರು. ತಾ ಪಂ ಸದಸ್ಯೆ ಕವಿತಾ ಎಸ್ ನಾಯ್ಕ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ರೇಖಾ, ಸದಸ್ಯರಾದ ಜಿನಚಂದ್ರ ಜೈನ್, ಪ್ರಭಾಕರ ಶೇಟ್ಟಿ, ಲಿಂಗಪ್ಪ ಗೌಡ, ಆನಂದ ಆಚಾರ್ಯ, ನರಸಿಂ ಬಲ್ಲಾಳ್ ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ವಿವಿದ ಸ್ರ್ದೆಗಳ್ಲು ಏರ್ಪಡಿಸಿ ಬಹುಮಾನ ನೀಡಲಾಯಿತು. ಮಕ್ಕಳಿಂದ ಪ್ರತಿಭಾ ಪ್ರದರ್ಶನ ನಡೆಯಿತು. ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಪ್ರಸ್ತಾವಿಸಿ ಸ್ವಾಗತಿಸಿದರು. ಸಹಶಿಕ್ಷಕಿ ಲಲಿತಾ ವಂದಿಸಿದರು. ಪುಷ್ಪಾ ಕಾರ್ಯಕ್ರಮ ನಿರ್ವಹಿಸಿದರು.

