ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ “ ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ 2016-17” , ತರಬೇತಿ ಕಾರ್ಯಕ್ರಮವನ್ನು ಮಾಣಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಜಯಲಕ್ಷ್ಮೀಯವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಅಂತರ್ಜಾಲದ ಕುರಿತು ಮಾಹಿತಿ ಹಾಗೂ ಉಪಯೋಗವನ್ನು ತಿಳಿಸಲು ಈ ತರಬೇತಿಯನ್ನು ನಡೆಸಲಾಗಿದೆ ಎಂದು ಹೇಳಿದರು.

???????????????????????????????

ಈ ಸಂದರ್ಭದಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಸಿ.ಶ್ರೀಧರ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ. ಸಲ್ಡಾನ , ಮಾಣಿ ದ.ಕ.ಜಿ.ಪ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಉಷಾ ಉಪಸ್ಥಿತರಿದ್ದರು. ಮಾಣಿ ಕ್ಲಸ್ಟರ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಂಪ್ಯೂಟರ್ ಶಿಕ್ಷಕರಾದ ಪ್ರಸಾದ್, ಸವಿತಾ, ಸೌಮ್ಯಲಕ್ಷ್ಮೀ ವಿದ್ಯಾರ್ಥಿಗಳಿಗೆ ಅಂತರ್ಜಾಲ ಕುರಿತು ತರಬೇತಿ ನೀಡಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *