ವಿಟ್ಲ: ಜೆಸಿಐ, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ವಿಟ್ಲದ ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ಬೋಧನಾ ತರಬೇತಿ ಕಾರ್ಯಾಗಾರವು ನಡೆಯಿತು. ನಾಲ್ಕು ದಿನಗಳ ಕಾಲ ನಡೆದ ಈ ಕಾರ್ಯಕ್ರಮವನ್ನು ವಿಟ್ಲದ ಜೇಸಿಐ ನಿಕಟ ಪೂರ್ವ ಅಧ್ಯಕ್ಷ ಬಾಬು ಕೆ ವಿ ಉದ್ಘಾಟಿಸಿದರು. ಅಧ್ಯಕ್ಷ ರಮೇಶ್ ಬಿ ಕೆ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ರಾಜಶೇಖರ್ ಮತ್ತು ಬಿಸಿಎಂ ವಿಸ್ತರಣಾಧಿಕಾರಿ ಜಯಣ್ಣ ಭಾಗವಹಿಸಿದ್ದರು. ನಿಲಯ ಮೇಲ್ವಿಚಾರಕಿ ವಿಜಯಲಕ್ಷ್ಮಿ ಸ್ವಾಗತಿಸಿದರು. ಮೇಲ್ವಿಚಾರಕಿ ಭವಾನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

1 (1)

By suddi9

Leave a Reply

Your email address will not be published. Required fields are marked *