ಬಂಟ್ವಾಳ:ಇಲ್ಲಿನ ಪುರಾಣ ಪ್ರಸಿದ್ಧ ಅರಳ-ಕೊಯಿಲ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಫೆ.1ರಿಂದ 11ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಬುಧವಾರ ಬೆಳಿಗ್ಗೆ ಬ್ರಹ್ಮಶ್ರೀ ಉದಯ ಪಾಂಗಣ್ಣಾಯರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಪ್ರಕ್ರಿಯೆಗಳು ಆರಂಭಗೊಂಡಿತು. ಇದೇ ವೇಳೆ ಉಗ್ರಾಣ ಮುಹೂರ್ತ ನೆರವೇರಿಸಲಾಯಿತು. ಫೆ.2ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಅರಳ ಗ್ರಾಮದ ಅಂಗಡಿ ಚಾವಡಿ ಮತ್ತು ಗುಡ್ಡೆ ಅಂಗಡಿ ಹಾಗೂ ಕೊಯಿಲ ಗ್ರಾಮದ ಅಣ್ಣಳಿಕೆ ಎಂಬಲ್ಲಿಂದ ಹೊರೆ ಕಾಣಿಕೆ ಶೊಭಾಯಾತ್ರೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮೊಕ್ತೇಸರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ರಾಜೇಂದ್ರ ಶೆಟ್ಟಿ ತಿಳಿಸಿದರು.

1btl-Aralaಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎನ್.ಎಂ.ಅಡ್ಯಂತಾಯ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ ಆಳ್ವ ಅಗ್ಗೊಂಡೆ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಮುರಳೀಧರ ಶೆಟ್ಟಿ, ಕೋಶಾಧಿಕಾರಿ ರಂಜನ್ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಡೊಂಬಯ ಬಿ.ಅರಳ, ಪ್ರಧಾನ ಅರ್ಚಕ ಎ.ರಾಜ ಭಟ್ ಹುಣ್ಸೆಯಡಿ, ಹರೀಶ ಭಟ್ ಮತ್ತಿತರರು ಉಪಸ್ಥಿತರಿದ್ದರು.
—

By Suddi9

Leave a Reply

Your email address will not be published. Required fields are marked *