ಮೈಸೂರಿನ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ 2015ರ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ಲಯನ್ ಕಿಶೋರ್ ಡಿ.ಶೆಟ್ಟಿ ಅವರು ಪಡೆದರು. ಚಾಮರಾಜ ಕ್ಷೇತ್ರದ ಶಾಸಕ ವಾಸು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿಯನ್ನು ಕನ್ನಡ ಸಂಸ್ಕೃತಿ ಸಚಿವೆ ಉಮಾಶ್ರೀ ವಿತರಿಸಿದರು. ಅಕಾಡೆಮಿಯ ಅಧ್ಯಕ್ಷ ಚಿಎಲ್.ಬಿ.ಶೇಖ ಮಾಸ್ತರ್ , ಅಕಾಡೆಮಿಯ ಸದಸ್ಯ ಉಮೇಶ್ ಸಾಲಿಯಾನ್ ಉಪಸ್ಥಿತರಿದ್ದರು.

