ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ 2016-17ನೇ ಸಾಲಿನ ಎನ್.ಎಸ್.ಎಸ್. ಘಟಕದ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು.ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಚಂದ್ರಶೇಖರ ಗೌಡ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಎನ್.ಎಸ್.ಎಸ್. ಘಟಕದ ಸಮಾರೋಪವು ಕೇವಲ ಔಪಚಾರಿಕವಾಗಿದ್ದು ಸೇವೆಯ ಕೆಲಸಗಳು ಅವಧಿಗೆ ಸೀಮಿತವಾಗದೇ ನಿರಂತರವಾಗಿರಬೇಕು. ಸೇವಾ ಮನೋಭಾವವನ್ನು ಜೀವನದುದ್ದಕ್ಕೂ ನಡೆಸಿಕೊಂಡು ಹೋಗಬೇಕೆಂದು ಸ್ಪೂರ್ತಿ ನೀಡಿದರು.

mbd_feb2_2
ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ, ಆಡಳಿತಾಧಿಕಾರಿ ಅಭಿನಂದನ್ ಶೆಟ್ಟಿ, ಮಹಿಳಾ ಕಲ್ಯಾಣ ಸಮಿತಿ ಸಂಯೋಜಕಿ ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಯೋಜನಾಧಿಕಾರಿ ಅರುಣ್ ಕುಮಾರ್ ವಾರ್ಷಿಕ ಕಾರ್ಯಕ್ರಮಗಳ ವರದಿ ವಾಚಿಸಿದರು.

By Suddi9

Leave a Reply

Your email address will not be published. Required fields are marked *