ಬಂಟ್ವಾಳ: ಕೇಂದ್ರ ಸರಕಾರ ಜಾರಿಗೆ ತರಳಿರುವ ಮೋಟಾರು ವಾಹನ ಕಾಯ್ದೆ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಸಭೆ ಶುಕ್ರವಾರ ಬಿ.ಸಿ.ರೋಡಿನ ಮೇಲ್ಸೇತುವೆಯ ಅಡಿಯಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಕೇಂದ್ರ ಸರಕಾರ ರೂಪಿಸಿದ ಮೋಟರ್ ವಾಹನ ತಿದ್ದುಪಡಿ ಕಾಯ್ದೆಯು ಬಡ ಮತ್ತು ದುಡಿಯುವ ವರ್ಗದ ಜನರಿಗೆ ಮಾರಕವಾಗಿದೆ. ವಾಹನ ಚಾಲನೆಯ ವೃತ್ತಿಯಲ್ಲಿರುವವರು ತಮ್ಮ ದುಡಿಮೆಯ ಪೂರ್ಣ ಮೊತ್ತವನ್ನು ದಂಡ ಪಾವತಿಗೆ ಮೀಸಲಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗುವಂತಾಗಿದೆ ಎಂದು ಟೀಕಿಸಿದ ಅವರು, ಸರಕಾರವು ಈ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಕೆಯಾಗುತ್ತಿದ್ದರೂ ನಿರಂತರವಾಗಿ ಕೇಂದ್ರ ಸರಕಾರ ಪೆಟ್ರೋಲಿಯಂ ಉತ್ಪನ್ನಗಳ ದರವನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದ ಅವರು ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತವಿದ್ದಾಗ ಪೆಟ್ರೋಲ್ ಬೆಲೆ ಏರಿಕೆಯಾದಾಗ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಯವರು ಈಗ ಏಕೆ ಮೌನವಾಗಿದ್ದಾರೆ ಎಂದು ಅವರು ಪ್ರಶ್ನಿಸಿದರು.

1

2

3
ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ದಲಿತ ಮುಖಂಡ ಜನಾರ್ಧನ ಚೆಂಡ್ತಿಮಾರ್ ಮಾತನಾಡಿದರು. ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮುಹಮ್ಮದ್ ನಂದಾವರ, ಪಕ್ಷದ ಪ್ರಮುಖರಾದ ಎ.ಸಿ.ಭಂಡಾರಿ, ಕಾಂಗ್ರೆಸ್ ಪಕ್ಷದ ಪುರಸಭೆ, ತಾಪಂ, ಎಪಿಎಂಸಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *