ಮೂಡುಬಿದಿರೆ: ಶ್ರೀಮಹಾವೀರ ಕಾಲೇಜು,ಹಳೆ ವಿದ್ಯಾರ್ಥಿ ಸಂಘ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮೂಡುಬಿದಿರೆ ತುಳುಕೂಟ ವತಿಯಿಂದ ಮಹಾವೀರ ಕಾಲೇಜಿನಲ್ಲಿ ಫೆ.16ರಂದು ತುಳುನಾಡ ಸಿರಿ ಮದಿಪು 2017 ಮಂಗಳೂರು ವಿ.ವಿ ಮಟ್ಟದ ಸಾಂಸ್ಕøತಿಕ ಸ್ಪರ್ಧೆಗಳು ನಡೆಯಲಿವೆ.ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಜಾನಕಿ ಬ್ರಹ್ಮಾವರ ಕಾರ್ಯಕ್ರಮಕ್ಕೆ ಬೆಳಗ್ಗೆ 9.15ಕ್ಕೆ ಚಾಲನೆ ನೀಡಲಿರುವರು. ಶ್ರೀಮಹಾವೀರ ಕಾಲೇಜಿನ ಪ್ರಾಂಶುಪಾಲ ಎಚ್.ಚಂದ್ರಶೇಖರ್ ದೀಕ್ಷಿತ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ್ ರೈ ಬಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು. ನಾಟಿ ವೈದ್ಯೆ ಲಲಿತಾ ಕೋಟೆಬಾಗಿಲು ಅವರನ್ನು ಸನ್ಮಾನಿಸಲಾಗುವುದು,

ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಕೆ.ಶ್ರೀಪತಿ ಭಟ್ ಸಮಾರೋಪ ಭಾಷಣ ಮಾಡಲಿದ್ದು, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಎಪಿಎಂಸಿ ಸದಸ್ಯ ಚಂದ್ರಹಾಸ ಸನಿಲ್, ಹಳೆ ವಿದ್ಯಾರ್ಥಿಗಳಾದ ಅಶ್ವಿನ್ ಜೆ.ಪಿರೇರಾ, ಜೋಯ್ಲಸ್ ಡಿ’ಸೋಜಾ ಮುಖ್ಯ ಅತಿಥಿಯಾಗಿರುವರು ಎಂದು ತಿಳಿಸಿದೆ.
