ಸಿದ್ಧಕಟ್ಟೆ: ಕಲ್ಕುರಿ ಪದವು ಕೇಸರಿ ಫ್ರೆಂಡ್ಸ್(ರಿ.) ಇದರ 9ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸಭಾ ಕಾರ್ಯಕ್ರಮ ಕಲ್ಕುರಿಪದವು ಮೈದಾನದಲ್ಲಿ ಇತ್ತೀಚೆಗೆ ನಡೆಯಿತು.
ದ.ಕ.ಜಿಲ್ಲಾ ಬಿ.ಜೆ.ಪಿ. ವಕ್ತಾರ ಜಿತೇಂದ್ರ ಎಸ್.ಕೊಟ್ಟಾರಿ ಮತ್ತು ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅಧ್ಯಕ್ಷತೆ ವಹಿಸಿದರು. ಪ್ರಗತಿಪರ ಕೃಷಿಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಬಿ.ಜೆ.ಪಿ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ತಾ.ಪಂ. ಮಾಜಿ ಸದಸ್ಯ ರತ್ನಕುಮಾರ್ ಚೌಟ, ಸಂಗಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಸತೀಶ್ ಪೂಜಾರಿ, ಉದ್ಯಮಿ ನಿತ್ಯಾನಂದ ಪೂಜಾರಿ ಕೆಂತಲೆ, ನಿತಿನ್, ಕಲ್ಕುರಿ ಪದವು ಕೇಸರಿ ಫ್ರೆಂಡ್ಸ್‍ನ ಅಧ್ಯಕ್ಷ ಶರತ್ ಕಲ್ಕುರಿ ಮತ್ತಿತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಪ್ರಭು, ಶಾಲಾ ಶಿಕ್ಷಕಿ ವಿಜಯ ಭಂಡಾರಿ, ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗದ ಬಡವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮತ್ತು ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಅಂಗನವಾಡಿಯ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ನಡೆಯಿತು.
ಸಂತೋಷ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಅಜೇಯ್ ಅಳಕೆ ಸ್ವಾಗತಿಸಿದರು. ರತ್ನಾಕರ ಕಲ್ಕುರಿ ವಂದಿಸಿದರು.
