ಸಿದ್ಧಕಟ್ಟೆ: ಬಂಟ್ವಾಳ ತಾಲೂಕು ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಂಗಬೆಟ್ಟು ಗ್ರಾಮ ಪಂಚಾಯತ್ ಇದರ ಜಂಟಿ ಆಶ್ರಯದಲ್ಲಿ ನಗದು ರಹಿತ ವ್ಯವಹಾರದ ಬಗ್ಗೆ ಮಾಹಿತಿ ಕಾರ್ಯಕ್ರಮ ಕಾಲೇಜಿನಲ್ಲಿ ಶನಿವಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿಜಯ ಬ್ಯಾಂಕ್ ಸಿದ್ಧಕಟ್ಟೆ ಶಾಖೆಯ ಶಾಖಾ ವ್ಯವಸ್ಥಾಪಕ ಶ್ರವಣ್ ರಾಜ್ ನಗದು ರಹಿತ ವ್ಯವಹಾರದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಸತ್ಯನಾರಾಯಣ ಭಟ್ ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಂಗಬೆಟ್ಟು ಗ್ರಾ.ಪಂ. ಅಭಿವೃದ್ಧಿ ಅಕಾರಿ ಸಿಲ್ವಿಯಾ ಫೆರ್ನಾಡಿಸ್, ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಗುಲಾಬಿ ಶೆಟ್ಟಿ, ಸಂಗಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಸತೀಶ್ ಪೂಜಾರಿ, ಸಂಗಬೆಟ್ಟು ಗ್ರಾ.ಪಂ.ಸದಸ್ಯರಾದ ಶ್ರೀಧರ್ ಎಸ್.ಪಿ., ಸುರೇಶ್ ಕುಲಾಲ್, ಕೆ.ಮಯ್ಯದಿ, ಮತ್ತಿತರರು ಇದ್ದರು.

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ, ನಗದು ರಹಿತ ವ್ಯವಹಾರ ಅಭಿಯಾನದ ನೋಡಲ್ ಅಕಾರಿ ಪ್ರೊ.ವಿದ್ಯಾದರ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರಸನ್ನ ಕುಮಾರ್ ಕೆ.ಎನ್. ವಂದಿಸಿದರು.
