ಬಂಟ್ವಾಳ: ಬಂಟ್ವಾಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.25 ರಂದು ಸಿದ್ಧಕಟ್ಟೆ ಪದವಿ ಪೂರ್ವ ಕಾಲೇಜಿನ ಪರಿಸರದಲ್ಲಿ ಸಡೆಸಲಾಗುವುದು ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ ಮೋಹನ್ ರಾವ್ ತಿಳಿಸಿದ್ದಾರೆ. ಸಿದ್ಧಕಟ್ಟೆ ಪ್ರೌಢ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಸೀತಾರಾಮ ಶಾಂತಿ ಕಂಬಳದೋಡಿ ಇವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಯಿತು. ಬೆಳಿಗ್ಗೆ ವರ್ಣ ರಂಜಿತ ಮೆರವಣಿಗೆ, ಉದ್ಘಾಟನಾ ಸಮಾರಂಭ ,ವಿಚಾರ ಗೋಷ್ಠಿಗಳು, ಕವಿಗೋಷ್ಠಿ, ಪುಸ್ತಕ ಪ್ರದರ್ಶನ ,ಕೃತಿಗಳ ಬಿಡುಗಡೆಯೊಂದಿಗೆ ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸುವ ಬಗ್ಗೆ ಚರ್ಚಿಸಲಾಯಿತು. ಸಂಜೆ ಯಕ್ಷಗಾನ ಬಯಲಾಟ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮ ಸಂಯೋಜಿಸುವುದೆಂದು ತೀರ್ಮಾನಿಸಲಾಯಿತು.
ಕ.ಸಾ.ಪ ನಿಕಟ ಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಪ್ರಸ್ತಾವಣೆ ಗೈದು ಸಮ್ಮೇಳನ ನಡೆಸುವ ಬಗ್ಗೆ ಮಾಹಿತಿ ನೀಡಿದರು , ಬಂಟ್ವಾಳ ವಲಯ ಸಮಿತಿ ಸಂಚಾಲಕ ಗೋಪಾಲ ಅಂಚನ್‍ವಿವಿಧ ಸಮಿತಿಗಳ ರಚನೆಯ ಬಗ್ಗೆ ಮಾರ್ಗದರ್ಶನ ಮಾಡಿದರು. ತಾ.ಪಂ ಸದಸ್ಯ ಪ್ರಭಾಕರ ಪ್ರಭು, ಕುಕ್ಕಿಪಾಡಿ ಗ್ರಾ.ಪಂ ಅಧ್ಯಕ್ಷ ದಿನೇಶ್, ಮಾಜಿ ತಾ.ಪಂ ಸದಸ್ಯ ಅರ್ಕಕೀರ್ತಿ ಇಂದ್ರ, ಪ.ಪೂ.ಕಾಲೇಜಿನ ಪ್ರಾಚಾರ್ಯ ಪದ್ಮನಾಭ ರೈ, ಡಾ.ಸುದೀಪ್ ಚರ್ಚೆಯಲ್ಲಿ ಭಾಗವಹಿಸಿ ವಿವಿಧ ಸಲಹೆಗಳನಿತ್ತರು. ರಾಷ್ಟ್ರ ಶಿಕ್ಷಕ ಪುರಸ್ಕøತ ರಮೇಶ ನಾಯಕ್ ,ಕೊಳಕೆ ಗಂಗಾಧರ ಭಟ್ , ಶಿವಶಂಕರ್, ಶ್ರೀಧರ ಪೈ, ರೊನಾಲ್ಡ್ ಮೊರಾಸ್, ಸೀತಾರಾಮ ಶೆಟ್ಟಿ, ಉದ್ಯಮಿ ಎಮ್.ಎಸ್.ಉಸ್ಮಾನ್ ಮೊದಲಾದವರು ಉಪಸ್ಥಿತರಿದ್ದರು.
ಕಾಲೇಜಿನ ಉಪಪ್ರಾಂಶುಪಾಲ ರಮಾನಂದ ಸ್ವಾಗತಿಸಿ, ಶಿಕ್ಷಕ ಮಹೇಶ್ ನಿರೂಪಿಸಿ , ಉಪನ್ಯಾಸಕ ಸಂಜಯ್ ವಂದಿಸಿದರು.
