ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯ ಸರ್ಕಾರದ ಪ್ರತಿಷ್ಠಿತ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಮತ್ತು ಮದರ್ ತೆರೆಸಾ ‘ಸಂತ’ ಪದವಿ ಪ್ರಾಪ್ತಿ ಸಂಭ್ರಮಾಚರಣೆ ಕಾರ್ಯಕ್ರಮವು ಇದೇ 28ರಂದು ಅಪರಾಹ್ನ 3ಗಂಟೆಗೆ ಬಂಟ್ವಾಳ ಶ್ರೀ ಮಂಜುನಾಥೇಶ್ವರ ಧರ್ಮಸ್ಥಳ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ ಹೇಳಿದ್ದಾರೆ.
ಬಿ.ಸಿ.ರೋಡ್ನಲ್ಲಿ ಶನಿವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಮಾಜಿ ಸಚಿವ ಬಿ. ಸುಬ್ಬಯ್ಯ ಶೆಟ್ಟಿ, ಬಿ. ಎ. ಮೊಯ್ದಿನ್, ದಿನೇಶ್ ಅಮೀನ್ ಮಟ್ಟು ಇವರನ್ನು ಅಭಿನಂದಿಸಲಾಗುವುದು.
ಸಾಹಿತಿ, ಸಂಶೋಧಕ ಮುದ್ದು ಮೂಡುಬೆಳ್ಳೆ ಮತ್ತು ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಡಾ. ಸದಾನಂದ ಪೆರ್ಲ ಹಾಗೂ ಮುಸ್ಲಿಂ ಲೇಖಕರ ಸಂಘದ ಉಪಾಧ್ಯಕ್ಷ ಮಹಮ್ಮದ್ ಆಲಿ ಇವರು ಅಭಿನಂದನಾ ಭಾಷಣ ಮಾಡುವರು.
ಪುತ್ತೂರು ಸಂತ ಫಿಲೋಮಿನಾ ಕಾಲೇಜು ಸ್ನಾತಕೋತ್ತರ ಕೇಂದ್ರ ಅಧ್ಯಕ್ಷ ಡಾ. ಆ್ಯಂಟೋನಿ ಪ್ರಕಾಶ್ ಮೊಂತೆರೋ ಇವರು ಸಂತ ಮದರ್ ತೆರೆಸಾ ಗುಣಗಾನ ಮಾಡುವರು. ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ಕೆಪಿಸಿಸಿ ಉಪಾಧ್ಯಕ್ಷ ಡಾ. ಬಿ.ಎಲ್.ಶಂಕರ್, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್, ಶಾಸಕರಾದ ಕೆ. ಅಭಯಚಂದ್ರ ಜೈನ್, ಕೆ. ವಸಂತ ಬಂಗೇರ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ. ಶೆಟ್ಟಿ, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ರಾಜೀವಗಾಂಧಿ ಆರೋಗ್ಯ ವಿವಿ ನಿದರ್ೇಶಕ ಡಾ.ರಘು, ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಬುಡಾ ಮಾಜಿ ಅಧ್ಯಕ್ಷ ಪಿಯೂಸ್ ಎಲ್.ರೊಡ್ರಿಗಸ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ ಕೋರ್ಯ ಉಪಸ್ಥಿತರಿದ್ದರು.
