ಶೂಟಿಂಗ್ ವೇಳೆ ಅಮೀಷಾ ಪಟೇಲ್ಗೆ ಗಾಯ
ಮುಂಬೈ: ‘ಕಹೋ ನಾ ಪ್ಯಾರ್ ಹೆ’ ಖ್ಯಾತಿಯ ನಟಿ ಅಮೀಷಾ ಪಟೇಲ್ ಮುಂಬೈಯಲ್ಲಿ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದ ವೇಳೆ ತನ್ನ ಮೊಣಕಾಲಿಗೆ ಗಾಯಮಾಡಿಕೊಂಡಿದ್ದಾರೆ.
ಸಿನಿಮಾವೊಂದರ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮೇಲಿನಿಂದ ಕೆಳಗೆ ಬಿದ್ದ ಅಮೀಷಾಳ ಮೊಣಕಾಲಿಗೆ ತೀವ್ರ ಗಾಯವಾಗಿತ್ತು. ಕೂಡಲೇ ವೈದ್ಯರನ್ನು ಸ್ಥಳಕ್ಕೆ ಕರೆಸಿ ಆಕೆಗೆ ಚಿಕಿತ್ಸೆ ನೀಡಲಾಯಿತು. ಸದ್ಯ ನೋವು ಕಡಿಮೆಯಾಗಿದ್ದು ತನ್ನ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ನೀಲಿಕಂಗಳ ಚೆಲುವೆ ಟ್ವಿಟರ್ನಲ್ಲಿ ಹೇಳಿಕೊಂಡಿದ್ದಾರೆ.

 

By suddi9

Leave a Reply

Your email address will not be published. Required fields are marked *