ಬಂಟ್ವಾಳ:ರಾಜ್ಯದ 160 ರಾಜ್ಯಗಳಲ್ಲಿ ಬರ ತಾಂಡವವಾಡುತ್ತಿದ್ದರೂ, ಪರಿಹಾಋ ಕ್ರಮ ಕೈಗೊಳ್ಳಬೇಕಾದ ರಾಜ್ಯ ಸರ್ಕಾರ ಚಿರನಿದ್ರೆಯಲ್ಲಿದೆ, ಜಿಲ್ಲೆಯಲ್ಲಿರುವ ಸಚಿವರುಗಳು ಹಾಗೂ ಕಾಂಗ್ರೇಸ್ ಶಾಸಕರು ತಮ್ಮ ತಮ್ಮ ಸ್ವಾರ್ಥಕ್ಕಾಗಿ ಒದ್ದಾಡುತ್ತಿದ್ದಾರೆಯೇ ವಿನಃ ಜನತೆನಪರ ಕಾಳಜಿ ಇವರಲ್ಲಿಲ್ಲ ಎಂದು ಬಿಜೆಪಿ ಪ್ರಮುಖರು ಆರೋಪಿಸಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿ ಸಮಿತಿ ಆಶ್ರಯದಲ್ಲಿ ರಾಜ್ಯಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿ.ಸಿ.ರೋಡಿನಲ್ಲಿ ಶುಕ್ರವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ಧುರೀಣರು ರಾಜ್ಯದ ಕಾಂಗ್ರೇಸ್ ನೇತೃತ್ವದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಬರಪೀಡಿತ ವಾಗಿರುವ ರಾಜ್ಯದಲ್ಲಿ ಜನ ರೂ ಹಾಗೂ ಜಾನುವಾರುಗಳು ತತ್ತರಿಸಿ ಹೋಗಿವೆ, ಸ್ವಯಂ ಕಾಳಜಿ ವಹಿಸದ ರಾಯ ಸರ್ಕಾರ ಕೇಂದ್ರನೀಡಿದ ಅನುದಾನವನ್ನೂ ಉಪಯೋಗಿಸದೇ ಜನರ, ರೈತರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದರು. ಮುಂದಿನ ಬಜೆಟ್ ನಲ್ಲಿ ರೈತಪರವಾದ ಕಾರ್ಯಕ್ರಮಗಳನ್ನು ನೀಡುವಂತೆ ಒತ್ತಾಯಿಸಿದ ಅವರು, ರಾಜ್ಯದ ರೈತರ ಸಾಲವನ್ನು ತಕ್ಷಣ ಮನ್ನಾ ಮಾಡಬೇಕು, ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಬರಪರಿಹಾರಕ್ಕೆ ಕ್ರ ವಾಗಬೇಕು, ಜಾನುವಾರುಗಳಿಗೆ ಮೇವು ಒದಗಿಸಲು ಜಿಲ್ಲಾಧಿಕಾರಿಒಗಳಿಗೆ ಆದೇಶ ನೀಡಬೇಉ ಮತ್ತು ಹಣ ಬಿಡುಗಡೆ ಮಾಡಬೇಕು.

1 (2)
ಗೋಶಾಲೆಗಳನ್ನು ತೆರೆದು ಸಂಕಷ್ಟದಲ್ಲಿರುವ ರೈತರ ಜಾನುವಾರುಗಳಿಗೆ ಆಶ್ರಯ ಒದಗಿಸಬೇಕು, ವಲಸೆ ರೈತರಿಗೆ ಉದ್ಯೋಗ ಭರವಸೆ ಯೋಜನೆಯಡಿ ಕೆಲಸ ನೀಡಬೇಕು ಮೊದಲಾದ ಬೇಡಿಕೆಗಳನ್ನು ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಯಿತಯ
ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಉಮಾನಾಥ ಕೋಟ್ಯಾನ್, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ರಾಜೀವ ಭಂಡಾರಿ, ಬಜೆಪಿಯ ರಾಜ್ಯ ವಕ್ತಾರೆ ಸುಲೋಚನಾ ಜಿ.ಕೆ.ಭಟ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ,ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಜಿ.ಪಂ. ಸದಸ್ಯರಾದ ತುಂಗಪ್ಪ ಬಂಗೇರ, ಕಮಲಾಕ್ಷಿ, ರವೀಂದ್ರ ಕಂಬಳಿ, ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು, ಪ್ರಮುಖರಾದ ಜಿ.ಆನಂದ , ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ತನಿಯಪ್ಪ ಗೌಡ, ಚೆನ್ನಪ್ಪ ಕೋಟ್ಯಾನ್, ಸುಗುಣಾ ಕಿಣಿ, ವಜ್ರನಾಥ, ದಿನೇಶ್ ಭಂಡಾರಿ, ಮಚ್ಛೇಂದ್ರನಾಥ ಸಾಲ್ಯಾನ್, ರತ್ನಕುಮಾರ್ ಚೌಟ, ದೇವಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *