ಮುಂಬಯಿ, :ಬೃಹನ್ಮುಂಬಯಿ ಮಹಾನಗರ ಪಾಲಿಕೆಯ ನೂತನ ಮೇಯರ್ ಪ್ರಾಚಾರ್ಯ ವಿಶ್ವನಾಥ್ ಮಹದೇಶ್ವರ್ ಅವರು ಗುರುವಾರ (09.03.2017) ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವ ಭವನಕ್ಕೆ ಭೇಟಿ ನೀಡಿದರು. ಶ್ರೀ ನಾರಾಯಣ ಗುರು ಪ್ರತಿಮೆಗೆ ಹೂಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ, ಭಾರತ್ ಬ್ಯಾಂಕ್‍ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ಅವರು ಸೇರಿ ನೂತನ ಮೇಯರ್ ವಿಶ್ವನಾಥ್ ಮಹದೇಶ್ವರ್ ಅವರನ್ನು ಶಾಲು ಹೊದಿಸಿ, ಫಲಪುಷ್ಪ ಗುಚ್ಛ ನೀಡಿ ಗೌರವಿಸಿದರು.

Mumbai Mayor @ Billawara 5

Mumbai Mayor @ Billawara Bhanva-1

Mumbai Mayor @ Billawara Bhanva-2

Mumbai Mayor @ Billawara Bhanva-4

Mumbai Mayor @ Billawara Bhanva-6

Mumbai Mayor @ Billawara Bhanva-8

Mumbai Mayor @ Billawara Bhanva-9

Mumbai Mayor @ Billawara Bhanva-12ಈ ಸಂದರ್ಭದಲ್ಲಿ ಅಸೋಸಿಯೇಶನ್‍ನ ಉಪಾಧ್ಯಕ್ಷರುಗಳಾದ ರಾಜ ವಿ.ಸಾಲ್ಯಾನ್, ಭಾಸ್ಕರ ವಿ.ಬಂಗೇರ, ಮತ್ತು ಡಾ| ಯು.ಧನಂಜಯ ಕುಮಾರ್, ಗೌ| ಪ್ರ| ಕಾರ್ಯದರ್ಶಿ ಧರ್ಮಪಾಲ ಜಿ.ಅಂಚನ್, ಗೌ| ಪ್ರ| ಕೋಶಾಧಿಕಾರಿ ಮಹೇಶ್ ಸಿ.ಕಾರ್ಕಳ, ಗೌ| ಜೊತೆ ಕಾರ್ಯದರ್ಶಿಗಳಾದ ಧನಂಜಯ ಎಸ್.ಕೋಟ್ಯಾನ್, ಶಾಲಾ ಸಮಿತಿಯ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್, ಶ್ರೀನಿವಾಸ ಕರ್ಕೇರ, ಶಂಕರ್ ಸುವರ್ಣ ಖಾರ್, ಶ್ರೀಧರ್ ಪೂಜಾರಿ ಸೇರಿದಂತೆ ಅಸೋಸಿಯೇಶನ್‍ನ ಸ್ಥಳೀಯ ಮತ್ತು ಸಮನ್ವಯ ಸಮಿತಿಗಳ ಕಾರ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *