ಬಂಟ್ವಾಳ:ತಾಲ್ಲೂಕಿನ ಬರಿಮಾರು ನೇತ್ರಾವತಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಇನ್ಸ್ಪೆಕ್ಟರ್ ಬಿ.ಕೆ.ಮಂಜಯ ನೇತೃತ್ವದ ಪೊಲೀಸರು ಶುಕ್ರವಾರ ದಾಳಿ ನಡೆಸಿ ಸುಮಾರು ರೂ 10ಲಕ್ಷ ಮೌಲ್ಯದ 20ಲೋಡ್ ಮರಳು ಮತ್ತು 12 ದೋಣಿ ಮತ್ತಿತರ ಸಾಮಾಗ್ರಿ ವಶಪಡಿಸಿಕೊಂಡ ಘಟನೆ ನಡೆದಿದೆ.
ಬಂಟ್ವಾಳ ತಾಲ್ಲೂಕಿನ ಬರಿಮಾರು ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳು ರಾಶಿ ಪತ್ತೆಯಾಗಿರುವ ದೃಶ್ಯ. 
ಇಲ್ಲಿನ ನೇತ್ರಾವತಿ ನದಿಯಲ್ಲಿ ಕಳೆದ ಹಲವು ಸಮಯದಿಂದ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆರೋಪ ಕೇಳಿ ಬಮದ ಹಿನ್ನೆಲೆಯಲ್ಲಿ ಎಸ್ಪಿ ಭೂಷಣ್ ಜಿ.ಬೊರಸೆ ಸೂಚನೆಯಂತೆ ಹೆಚ್ಚುವರಿ ಎಸ್ಪಿ ವೇದಮೂತರ್ಿ ಮತ್ತು ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್. ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಬಿ.ಕೆ.ಮಂಜಯ ನೇತೃತ್ವದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 20ಲೋಡ್ ಮರಳು ಮತ್ತು ನೇತ್ರಾವತಿ ನದಿಯಿಂದ ಮರಳು ಹೊರತೆಗೆಯಲು ಬಳಸುತ್ತಿದ್ದರು ಎನ್ನಲಾದ 12 ದೋಣಿ ಮತ್ತಿತರ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
