ಬಂಟ್ವಾಳ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯಾರ ಹೋರಾಟವನ್ನು ಬೆಂಬಲಿಸುವ ಸಲುವಾಗಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬಿ.ಸಿ.ರೋಡ್ ತಹಶೀಲ್ದಾರರ ಕಚೇರಿ ಬಳಿ ಎಂ.ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಧರಣೆ ಸತ್ಯಾಗ್ರಹ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಅಂಗನವಾಡಿ ಕಾರ್ಯಕರ್ತೆಯರ ನ್ಯಾಯಯುತವಾದ ಬೇಡಿಕೆಗಳನ್ನು ಕರ್ನಾಟಕ ರಾಜ್ಯ ಸರಕಾರ ಕೂಡಲೇ ಈಡೇರಿಸಬೇಕೇಂದು ಒತ್ತಾಯಿಸುವ ಈ ಧರಣೆ ಸತ್ಯಾಗ್ರಹದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕರ್ನಾಟಕ ರಾಜ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ರವಾನಿಸಬೇಕೆಂದು ಎಂ ತುಂಗಪ್ಪ ಬಂಗೇರ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
