ಬಂಟ್ವಾಳ: ಮುಯುದ್ದೀನ್ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಿ.ಎ. ಕೈಗಾರಿಕಾ ತರಬೇತಿ ಸಂಸ್ಥೆ ತುಂಬೆಯ ಎನ್ನೆಸ್ಸೆಸ್ ಘಟಕದ ಉತ್ತಮ ಸಾಧನೆಯನ್ನು ಪರಿಗಣಿಸಿ ಕೇಂದ್ರ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯದ 2016ನೆ ಸಾಲಿನ ರಾಷ್ಟ್ರೀಯ ಯುವ ನಾಯಕತ್ವ ಪ್ರಶಸ್ತಿ ಲಭಿಸಿದೆ.
![]()
ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ನವೀನ್ ಕುಮಾರ್ ಕೆ.ಎಸ್. ಮತ್ತು ಕಾರ್ಯಕ್ರಮ ಅಧಿಕಾರಿ ಶ್ರೀ ಮಿಥುನ್ ಎ.ಎಸ್. ಹಾಗೂ ಕಿರಿಯ ತರಬೇತಿ ಅಧಿಕಾರಿ ಶ್ರೀ ಕಿಶನ್ ಮತ್ತು ಸ್ವಯಂ ಸೇವಕ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರು ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಿದ್ದಾರೆ.
ಸಂಸ್ಥೆಯಲ್ಲಿ 2013ರಲ್ಲಿ ಪ್ರಾರಂಭವಾದ ಎನ್ನೆಸ್ಸೆಸ್ ಘಟಕವು ಹಲವಾರು ವಾರ್ಷಿಕ ವಿಶೇಷ ಶಿಬಿರ, ದೈನಂದಿನ ಚಟುವಟಿಕೆಗಳು, ಆರೋಗ್ಯ ಶಿಬಿರ, ಉಪನ್ಯಾಸ, ಸ್ವಚ್ಛತಾ ಆಂದೋಲನ, ಶ್ರಮದಾನ ಮತ್ತು ಜಾಗೃತಿ ಜಾಥಾ ಸೇರಿದಂತೆ ಮುಂತಾದ ಹತ್ತು ಹಲವು ಕಾರ್ಯಕ್ರಮಗಳನ್ನು ನಡೆಸಿದೆ. ಆ ಮೂಲಕ ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯೋದ್ದೇಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಅಂಶಗಳನ್ನು ಪರಿಗಣಿಸಿ ಇದೇ ಮೊದಲ ಬಾರಿಗೆ ಉದ್ಯೋಗ ಮತ್ತು ತರಬೇತಿ ಇಲಾಖೆಯಲ್ಲಿ ರಾಜ್ಯಕ್ಕೆ ಅತ್ಯುತ್ತಮ ಎನ್.ಎಸ್.ಎಸ್. ಘಟಕವೆಂದು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
