ಬಂಟ್ವಾಳ,  ತಾಲೂಕಿನ ಮೇರಮಜಲು ಗ್ರಾಮದ ಬದ್ರೀಯ ನಗರದ ಬಳಿಯ ಮೊಬೈಲ್ ಟವರ್ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಅಪರಿಚಿತ ಮೃತದೇಹವೊಂದು ಪತ್ತೆಯಾದ ಘಟನೆ ಸೋಮವಾರ ನಡೆದಿದೆ.

IMG-20170327-WA0013

ಸುಮಾರು 50ರಿಂದ 55 ವರ್ಷ ಪ್ರಾಯದ ಗಂಡಸಿನ ಮೃತ ದೇಹವಾಗಿದ್ದು ಸುಮಾರು ಒಂದು ತಿಂಗಳ ಹಿಂದೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಬಂಟ್ವಾಳ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *