ಮೂಡುಬಿದಿರೆ: ಇರುವೈಲು ಸಮೀಪದ ಪುಚ್ಚೆಮೊಗರುವಿನಲ್ಲಿ ಕಾರ್ಯಾಚರಿಸುತ್ತಿದ್ದ ಜಲ್ಲಿ ಕ್ರಶರ್‍ನಲ್ಲಿ ಆಕಸ್ಮಿಕವಾಗಿ ಸ್ಪೋಟ ಸಂಭವಿಸಿದ್ದು, ಕಾರ್ಮಿಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ಸೊರಬ ತಾಲೂಕಿನ ಬಾಣಾಮತಿ ಎಂಬಲ್ಲಿನ ಉಮೇಶ್ (38) ಎಂದು ಗುರುತಿಸಲಾಗಿದೆ. ಕ್ರಶರ್‍ನೊಳಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಆಕಸ್ಮಿಕ ಸ್ಪೋಟ ಸಂಭವಿಸಿದ್ದು, ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದಾಗಿ ಮೂವರು ಕಾರ್ಮಿಕ ಗಾಯಗೊಂಡಿದ್ದು, ತೀವ್ರ ಗಾಯಗೊಂಡಿರುವ ಓರ್ವನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಸಿಪಿ ರಾಜೇಂದ್ರ, ಮೂಡುಬಿದಿರೆ ಇನ್ಸ್‍ಪೆಕ್ಟರ್ ರಾಮಚಂದ್ರ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು.

By suddi9

Leave a Reply

Your email address will not be published. Required fields are marked *