ಬಂಟ್ವಾಳ: ನಾಲ್ಕು ಮಾರ್ಗಗಳನ್ನು ಸಂಧಿಸುವ ಬಂಟ್ವಾಳದ ಬೈಪಾಸ್ ತುಂಬೆ ಜಂಕ್ಷನ್‍ನನ್ನು ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಭೂ ಸ್ವಾಧೀನಕ್ಕೆ ಪ್ರಸ್ತಾವ ಕಳುಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶನಿವಾರ ಮಧ್ಯಾಹ್ನ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು ತುಂಬೆ ಜಂಕ್ಷನ್‍ನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪರಿಸರದ ಭೂ ಸ್ವಾಧೀನಗೊಳಿಸಿ ಪ್ರಸ್ತಾಪವನ್ನು ಸರಕಾರಕ್ಕೆ ಸಲ್ಲಿಸುವಂತೆ ಸಲಹೆ ನೀಡಿದರು.IMG-20170401-WA0010

ನಾಲ್ಕು ಮಾರ್ಗಗಳನ್ನು ಸಂಧಿಸುವ ತುಂಬೆ ಜಂಕ್ಷನ್‍ನಲ್ಲಿ ವಾಹನಗಳ ದಟ್ಟನೆಯಿಂದ ಪ್ರತಿನಿತ್ಯವೂ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಸ್ತೆಯನ್ನು ಅಗಲೀಕರಗೊಳಿಸಲು ಅತೀ ಶ್ರೀರ್ಘವಾಗಿ ಪಕ್ರಿಯೆಯನ್ನು ಆರಂಭಿಸಿ ಅಗಲೀಕರಣದ ಕಾಮಗಾರಿಯನ್ನು ಆಧ್ಯತೆಯ ಮೇರೆಗೆ ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ಸೂಚಿಸಿದರು.

ನೋಡಲ್ ಅಧಿಕಾರಿಯಾಗಿ ಇಒ: ಬಿ.ಸಿ.ರೋಡಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಖಾಸಗಿ ಪಿಪಿಪಿ ಮಾದರಿಯ ಬಸ್ ನಿಲ್ದಾಣಕ್ಕೆ ಸಂಬಂಧಿಸಿದಂತೆ ಉಂಟಾಗಬಹುದಾದ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹಾಗೂ ಇಲಾಖೆಯ ಮಧ್ಯೆ ಸಮನ್ವಯತೆ ಸಾಧಿಸಲು ಬಂಟ್ವಾಳ ತಾಪಂ ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾ ಮಿರಾಂದ ಅವರನ್ನು ನೂಡಲ್ ಅಧಿಕಾರಿಯನ್ನಾಗಿ ಸಭೆಯಲ್ಲಿ ನಿಯುಕ್ತಿಗೊಳಿಸಲಾಯಿತು.

ಬಿ.ಸಿ.ರೋಡಿನ ಹಳೆ ತಾಪಂ ಕಟ್ಟಡ ಮತ್ತು ಪಕ್ಕದ ಉಪ ನೋಂದಣಿ ಕಚೇರಿಯನ್ನು ತೆರವುಗೊಳಿಸಿ ಇಲ್ಲಿ ಪಿಪಿಪಿ ಮಾದರಿಯಲ್ಲಿ ಸುಸಜ್ಜಿತವಾದ ಖಾಸಗಿ ಬಸ್ ನಿಲ್ದಾಣವನ್ನು ನಿರ್ಮಿಸಲು ಸಚಿವ ರಮಾನಾಥ ರೈ ಅವರು ಯೋಜನೆಯನ್ನು ಹಾಕಿ ಕೊಂಡಿದ್ದು ಈ ಸಂಬಂಧವಾಗಿ ಒಂದು ವಾರದ ಒಳಗೆ ಇರುವ ಎಲ್ಲ ಸಮಸ್ಯೆಗಳನ್ನು ನಿವಾರಿಸಿ ಯೋಜನೆಯನ್ನು ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಸಹಾಯಕ ಕಮಿಷನರ್ ರೇಣುಕಾ ಪ್ರಸಾದ್, ತಹಶೀಲ್ದಾರ್ ಪುರಂದರ ಹೆಗ್ಡೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಸನ್ನ, ರಾಷ್ಟ್ರೀಯ ಹೆದ್ದಾರಿಯ ಕಾರ್ಯಪಾಲ ಎಂಜಿನಿಯರ್ ರಮೇಶ್, ಸಹಾಯಕ ಕಾರ್ಯ ಪಾಲಕ ಅಬ್ದುಲ್ ರಹ್ಮಾನ್, ಬಂಟ್ವಾಳ ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್ ಉಮೇಶ್ ಭಟ್, ಎಂಜಿನಿಯರ್ ಅರುಣ್ ಪ್ರಕಾಶ್, ಕೆಯುಡಬ್ಲ್ಯುಎಸ್‍ನ ಶೋಭಾ ಲಕ್ಷ್ಮಿ, ಮುಖ್ಯಾಧಿಕಾರಿ ಸುಧಾಕರ್ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *