ಮಂಗಳೂರು:ಉರ್ವ ಪೊಲೀಸ್ ಠಾಣೆಯ ಎಸ್ ಐ ಐತಪ್ಪ ಅವರ ಮೇಲೆ ದುಷ್ಕರ್ಮಿಗಳು ತಡ ರಾತ್ರಿ ಹಲ್ಲೆ ನಡೆಸಿದ್ದಾರೆ. ಲೇಡಿಲ್ ನಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅಪರಿಚಿತರು ಬೈಕ್ ನಲ್ಲಿ ಬಂದು ರಾಡ್ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಎಸ್ ಐ ಅವರ ತಲೆಗೆ ಗಂಭೀರ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳ ಶೋಧ ಕಾರ್ಯಚರಣೆ ನಡೆಯುತ್ತಿದೆ.

