ಬಂಟ್ವಾಳ: ಬಾಬು ಜಗಜೀವನರಾಮ್ ಅವರ 110ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಸ್ಮರಣೆ ಬಂಟ್ವಾಳ ತಾಲೂಕು ಪಂಚಾಯಿತಿ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಈ ಸಂಧರ್ಭ ವಿಶೇಷ ಉಪನ್ಯಾಸ ನೀಡಿದ ರಾಜೀವ ಕೆ, ಬಾಬು ಜಗಜೀವನರಾಮ್ ಹಸಿರು ಕ್ರಾಂತಿಯ ಹರಿಕಾರ ಎಂದು ಖ್ಯಾತರಾಗಿದ್ದರು. ಧ್ವನಿ ಇಲ್ಲದವರಿಗೆ ಧ್ವನಿಯಾದವರು, ಶೋಷಣೆ ವಿರುದ್ಧ ದನಿಯೆತ್ತಿದವರು. ಕಾರ್ಮಿಕರಿಗೆ, ಮಹಿಳೆಯರಿಗೆ, ದೀನ ದಲಿತರಿಗೆ ನೆರವಾದವರು ಎಂದು ಹೇಳಿದರು.  1 (1)

ಜಗಜೀವನ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು, ರಕ್ಷಣೆಯಂಥ ಮಹತ್ತರ ಖಾತೆಯ ಜವಾಬ್ದಾರಿ ಹೊತ್ತಿದ್ದರು ಎಂದು ಹೇಳಿದರು.

ಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಬಂಗೇರ ಮಾತನಾಡಿ, ಇಂಥ ಕಾರ್ಯಕ್ರಮಗಳು ಕೇವಲ ಕಾಟಾಚಾರಕ್ಕಷ್ಟೇ ಸೀಮಿತವಾಗದೆ ಜನಸಮುದಾಯ ಭಾಗವಹಿಸುವಂತಾಗಬೇಕು. ಇಲ್ಲವಾದರೆ ಕಾರ್ಯಕ್ರಮಗಳನ್ನು ನಡೆಸುವುದರಲ್ಲಿ ಅರ್ಥವಿಲ್ಲ. ಮುಂದಿನ ಬಾರಿ ಸರಕಾರಿ ಕಾರ್ಯಕ್ರಮ ಆಯೋಜಿಸುವಾಗ ಇದಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸೂಚಿಸಿದರು.
ಈ ಸಂದರ್ಭ ಜಗಜೀವನರಾಮ್ ಅವರಿಗೆ ಗೌರವಾರ್ಪಣೆ ನಡೆಯಿತು. ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ. ಬಂಗೇರ, ತಾಪಂ ಇಒ ಸಿಪ್ರಿಯನ್ ಮಿರಾಂದಾ, ಉಪತಹಸೀಲ್ದಾರ್ ಪರಮೇಶ್ವರ ನಾಯ್ಕ, ಪುರಸಭಾ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್, ತಾಪಂ ಸದಸ್ಯ ಸಂಜೀವ ಪೂಜಾರಿ, ದಲಿತ ಮುಖಂಡರು ಹಾಗೂ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ವಿನಯಕುಮಾರಿ ಸ್ವಾಗತಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *