ಬಂಟ್ವಾಳ : ಪಾಣೆಮಂಗಳೂರಿಗೆ ಸಮೀಪದ ನಂದಾವರ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದಾತನನ್ನು  ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.ತೊಕ್ಕೊಟ್ಟು ಸಮೀಪದ ಕುತ್ತಾರ್ ನಿವಾಸಿ ಜಮಾಲ್ ಬಂಧಿತ ಆರೋಪಿಯಾಗಿದ್ದಾನೆ.ಖಚಿತ ವರ್ತಮಾನದ ಮೇರೆಗೆ ಡಿಸಿಐಬಿ ಇನ್ಸಪೆಕ್ಟರ್ ಅಮಾನುಲ್ಲಾ ಖಾನ್ ಮತ್ತು ಬಂಟ್ವಾಳ ನಗರ ಠಾಣೆಯ ಎಸ್ ಐ ರಕ್ಕಿತ್ ಮತ್ತವರ ಸಿಬ್ಬಂದಿಗಳು ಜಂಟಿಯಾಗಿ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.ಬಂಧಿತನಿಂದ ೨೦೦ಗ್ರಾಂ ಗಾಂಜಾವನ್ನು ವಶ ಪಡಿಸಿದ್ದಾರೆ.ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

By Suddi9

Leave a Reply

Your email address will not be published. Required fields are marked *