ಸುದ್ದಿ9ಬಂಟ್ವಾಳ: ಇಲ್ಲಿನ ಸಾರ್ವಜನಿಕ ಗ್ರಂಥಾಲಯದ ಸುಮಾರು 12 ಲ.ರೂ. ವೆಚ್ಚದಲ್ಲಿ ನಿಮರ್ಿಸಲಾದ ವಿಸ್ಕೃತ ಕಟ್ಟಡದ ಉದ್ಘಾಟನೆ ಶನಿವಾರ ನಡೆಯಿತು. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಕಟ್ಟಡದ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಚೆನ್ನಪ್ಪ ಕೋಟ್ಯಾನ್, ನಳಿನಿ ಶೆಟ್ಟಿ, ಜಿ.ಪಂ.ಸದಸ್ಯ ಎಂ.ಎಸ್. ಮಹಮ್ಮದ್, ತಾ.ಪಂ.ಸ್ಥಾಯಿಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಸದಸ್ಯ ಪದ್ಮಶೇಖರ ಜೈನ್, ಮುಖ್ಯ ಗ್ರಂಥಾಲಯ ಅಧಿಕಾರಿ ವೆಂಕಟೇಶ್, ತಹಶೀಲ್ದಾರ್ ಮಲ್ಲೇಸ್ವಾಮಿ, ಗ್ರಂಥಪಾಲಕಿ ನಮಿತಾ, ಕೆಆರ್ಐಡಿಎಲ್ನ ಎಕ್ಸಿಕ್ಯೂಟಿವ್ ಇಂಜಿನಿಯರ್ ಶೇಷಾದ್ರಿ ಮೊದಲಾದವರು ಉಪಸ್ಥಿತರಿದ್ದರು.


