ಮಂಗಳೂರು: ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್ನೆಸ್ಸೆಸ್ ಮತ್ತು ರೆಡ್ ಕ್ರಾಸ್ ಘಟಕದ ವತಿಯಿಂದ ಕೆ.ಎಂ.ಸಿ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಳೆದ ಶುಕ್ರವಾರ ನಡೆಯಿತು.

Cec blood donation camp inauguration

Cec Blood donation camp
ಕಾಲೇಜಿನ ಪ್ರಾಂಶುಪಾಲ ಡಾ.ಗಣೇಶ್ ವಿ.ಭಟ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಪ್ರಿಯಾ ವಿ. ಫ್ರ್ಯಾಂಕ್ ಶಿಬಿರವನ್ನು ಉದ್ಘಾಟಿಸಿದರು. ಕಾಲೇಜಿನ ಆಡಳಿತಾಧಿಕಾರಿ ಎಂ. ಗಣೇಶ್ ಕಾಮತ್ ಉಪಸ್ಥಿತರಿದ್ದರು. ಕೆ.ಎಂ.ಸಿಯ ಡಾ. ಶ್ರೀಜಿತ್ ಚಕ್ರವರ್ತಿ ರಕ್ತದಾನದ ಮಹತ್ವವನ್ನು ಕುರಿತು ವಿವರಿಸಿದರು.
ಎನ್ನೆಸ್ಸೆಸ್ ಘಟಕದ ಸಹಪ್ರಾಧ್ಯಾಪಕ ನಾರಾಯಣ ಸ್ವಾಮಿ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಬೋಧಕ, ಬೋಧಕೇತರರು ಸೇರಿದಂತೆ ಒಟ್ಟು 126 ಯೂನಿಟ್ ರಕ್ತವನ್ನು ಶಿಬಿರದಲ್ಲಿ ಸಂಗ್ರಹಿಸಲಾಯಿತು.

By Suddi9

Leave a Reply

Your email address will not be published. Required fields are marked *