ಬಂಟ್ವಾಳ : ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಜಯಂತಿ ಪೂಜಾರಿ ಅವರು ನೇಮಕಗೊಂಡಿದ್ದಾರೆ. ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಆದೇಶದ ಮೇರೆಗೆ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. 
