ಬಂಟ್ವಾಳ:ತಾಲ್ಲೂಕಿನ ಕಾವಳಮೂಡೂರು ಸಮೀಪದ ಕುದ್ರೋಟಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ನೇಹಿತನೊಂದಿಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆಗೆ ಬೈಕ್ ಉರುಳಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಮೃತರನ್ನು ಚಿಕ್ಕಮಂಗಳೂರು ನಿವಾಸಿ ನವಾಝ್(25) ಎಂದು ಗುರುತಿಸಲಾಗಿದ್ದು, ಇವರು ಗುರುವಾರ ಸಂಜೆ ತನ್ನ ಸ್ನೇಹಿತರೊಬ್ಬರನ್ನು ಬೈಕಿನಲ್ಲಿ ಕೂರಿಸಿಕೊಂಡು ಬಿ.ಸಿ.ರೋಡ್ ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.
