ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಲ್ಲಡ್ಕ ಬಾಳ್ತಿಲ ಕ್ಲಸ್ಟರ್ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಉದಯ ಕುಮಾರ್ ಇವರನ್ನು ಸನ್ಮಾನಿಸಲಾಯಿತು. ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ಗ್ರಾಮ ಪಂಚಾಯಿತಿ ಸದಸ್ಯರಾದ ಕಿಶೋರ್ ಶೆಟ್ಟಿ, ತ್ರಿವೇಣಿ, ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ ಸಪಲ್ಯ, ಮುಖ್ಯಶಿಕ್ಷಕಿ ಚಂದ್ರಾವತಿ, ಶಿಕ್ಷಕರಾದ ಮಂಜುನಾಥ, ಪ್ರೆಸಿಲ್ಲಾ, ಶರ್ಮಿಳಾ ಟಿ. ಮತ್ತಿತರರು ಇದ್ದರು.

