ಪಲ್ಲನ್’ವಾಲಾ ಪೋಸ್ಟ್ ಬಳಿಯ ಅಖ್ನೂರ್ ಸೆಕ್ಟರ್’ನಲ್ಲಿ ಪಾಕ್ ಪಡೆಗಳು ಭಾರತೀಯ ಯೋಧರತ್ತ ಗುಂಡಿನ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ತಡರಾತ್ರಿಯಿಂದ ಮಂಗಳವಾರ ಮುಂಜಾನೆಯವರೆಗೂ ಉಭಯ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.
ಈ ವಿಷಯ ಇಂದು ರಾಜ್ಯಸಭೆಯಲ್ಲಿ ಚರ್ಚೆಗೆ ಬಂದಿದೆ. ಪಾಕ್ ಕುಚೋದ್ಯಕ್ಕೆ ತಕ್ಕ ಉತ್ತರ ನೀಡುವಂತೆ ಪ್ರತಿಪಕ್ಷಗಳು ಸರ್ಕಾರವನ್ನು ಆಗ್ರಹಿಸಿವೆ.
