ಬಂಟ್ವಾಳ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರೇತರ ಸದಸ್ಯರನ್ನಾಗಿ ಮೂರು ವರ್ಷಗಳ ಕಾಲಾವಧಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಯೂಸ್ ಎಲ್. ರೋಡ್ರಿಗಸ್ ಸೇರಿದಂತೆ ಮೂವರನ್ನು ನಾಮನಿರ್ದೇಶನಗೊಳಿಸಿ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಮೈಸೂರಿನ ವೆಂಕಟರಾಮ, ಬೆಳಗಾವಿಯ ಸುರೇಶ್ ಗುರಪ್ಪ ತಳವಾರ ಮತ್ತು ದ.ಕ. ಜಿಲ್ಲೆಯ ಪಿಯೂಸ್ರನ್ನು ಮಂಡಳಿಯ ಅಧಿಕಾರೇತರ ಸದಸ್ಯರನ್ನಾಗಿ ನೇಮಿಸಿ ಮೂರು ವರ್ಷಗಳ ಕಾಲಾವಧಿಗೆ ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಪಿಯೂಸ್ ಎಲ್. ರೋಡ್ರಿಗಸ್ರವರು ವಿದ್ಯುತ್ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಇದೀಗ ಸಚಿವ ಬಿ.ರಮಾನಾಥ ರೈರವರ ಶಿಫಾರಸಿನ ಮೇರೆಗೆ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಾಮನಿರ್ದೇಶಿತ ಸದಸ್ಯನನ್ನಾಗಿ ಆಯ್ಕೆ ಮಾಡಲಾಗಿದೆ.
