ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಇಬ್ಬರು ಪ್ರಬಲ ಸ್ಪರ್ಧಿಗಳ ಬೆಂಬಲಿಗರು ಪರಸ್ಪರ ಹೊಡೆದಾಡಿದ ಘಟನೆ ಬಂಟ್ವಾಳ ಕಾಂಗ್ರೆಸ್ ಕಛೇರಿ ಮುಂಭಾಗದಲ್ಲಿ ಸೋಮವಾರ ಸಂಭವಿಸಿದೆ. ಚುನಾವಣೆಯ ಪ್ರಕ್ರಿಯೆ ನಡೆಯುತ್ತಿದ್ದಂತೆಯೇ ಅಧ್ಯಕ್ಷೀಯ ಆಕಾಂಕ್ಷಿಗಳಾದ ಮಿಥುನ್ ರೈ ಹಾಗೂ ಲುಕ್ಮಾನ್ ಬೆಂಬಲಿಗರ ನಡುವೆ ಸದಸ್ಯತನದ ವಿಚಾರದಲ್ಲಿ ಮಾತಿನಚಕಮಕಿ ನಡೆದು, ಬಳಿಕ ಹೊಡೆದಾಡಿಕೊಂಡರು. ಇದರಿಂದಾಗಿ ಸ್ಥಳದಲ್ಲಿ ಕೆಲಹೊತ್ತುಗಳ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

DSC_1948

ಘಟನೆಯಿಂದಾಗಿ 8 ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯೊಂದರಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆ. ಘಟನಾ ಸ್ಥಳದಲ್ಲಿ ಪಕ್ಷದ ನೂರಾರು ಮಂದಿ ಕಾರ್ಯಕರ್ತರುಜಮಾಯಿಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ತಿರುತ್ತಿದ್ದಂತೆಯೇ ಪಕ್ಷದ ಮುಖಂಡರು ಇತ್ತಂಡಗಳ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರೂ, ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಸುದ್ದಿ ತಿಳಿದ ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಈ ಸಂದರ್ಭದಲ್ಲಿ ಬಂಟ್ವಾಳ ರಥಬೀದಿಯಲ್ಲಿ ವಾಹನ ಸಂಚಾರವು ಅಸ್ತವ್ಯಸ್ಥ ಗೊಂಡಿತ್ತು. ರಸ್ತೆಯನ್ನೇ ಬಂದ್ ಮಾಡಿ ಚುನಾವಣಾ ಪ್ರಕ್ರಿಯೆಗೆ ಅನುವು ಮಾಡಿಕೊಟ್ಟರು. ಮಧ್ಯಾಹ್ನದ ಬಳಿಕ ವಾಹನ ಸಂಚಾರ ಯಥಾಸ್ಥಿತಿಗೆ ಮರಳಿತ್ತು. ಖವೈಎಸ್ಪಿ ರವೀಶ್ ಅವರ ನೇತೃತ್ವದಲ್ಲಿ ಬಿಗು ಪೊಲೀಸ್ ಭದ್ರತೆ ನೀಡಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.DSC_1947

DSC_1952

ದ.ಕ.ಜಿಲ್ಲಾ ಯುವ ಕಾಂಗ್ರೇಸ್ ಹಾಗೂ ಬಂಟ್ವಾಳ ತಾಲೂಕು ಯುವ ಕಾಂಗ್ರೇಸ್ ಅಧ್ಯಕ್ಷ ಹುದ್ದೆಗೆ ಸೋಮವಾರ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಕಛೇರಿಯಲ್ಲಿ ಚುನಾವಣೆ ನಡೆದಿತ್ತು. ಕಳೆದ ವಾರ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೇಸ್ ಕಛೇರಿಯಲ್ಲಿ ಯುವ ಕಾಂಗ್ರೇಸ್ ಕಾರ್ಯಕರ್ತರ ಎರಡು ಬಣಗಳ ನಡುವೆ ನಡೆದ ಮಾರಾಮಾರಿಯಲ್ಲಿ ಅಧ್ಯಕ್ಷ ಹುದ್ದೆಯ ಅಭ್ಯರ್ಥಿ ಲುಕ್ಮಾನ್ ಬಂಟ್ವಾಳ ಅವರು ಗಾಯಗೊಂಡು ಆಸ್ಪತ್ರೆಗೆ ಸೇರಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಮ್ಮೆ ಯುವ ಕಾಂಗ್ರೇಸ್ ನ ಎರಡು ಬಣಗಳ ಕಾರ್ಯಕರ್ತರ ಮಧ್ಯೆ ಬಂಟ್ವಾಳದಲ್ಲಿ ಮಾರಾಮಾರಿ ನಡೆದಿದೆ.

By Suddi9

Leave a Reply

Your email address will not be published. Required fields are marked *