ಬಂಟ್ವಾಳ: ಮನುಷ್ಯ ತಾನು ಸತ್ತಾಗ ಎಷ್ಟು ಹಣ ಸಂಪಾದನೆ ಮಾಡಿದ್ದಾನೆ ಎನ್ನುವುದಕ್ಕಿಂತ ಎಷ್ಟು ಜನರ ಪ್ರೀತಿ ವಿಶ್ವಾಸ ಗಳಿಸಿದ್ದಾನೆ ಎನ್ನುವುದು ಮುಖ್ಯವಾಗುತ್ತದೆ. ದ್ವೇಷ ಸಾಧನೆ ಮಾಡುವ ಬದಲು ಪ್ರೀತಿ ಗಳಿಕೆಯಿಂದ ಜನರ ಮನ ಗೆಲ್ಲಲು ಸಾಧ್ಯವಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು.BTW_MAY19_6

ಸಾರ್ವಜನಿಕ ಹಿಂದೂ ರುದ್ರಭೂಮಿ ಸಮಿತಿ ಹಾಗೂ ಅಭಿವೃದ್ದಿ ಸಮಿತಿ ಕಂಚಿನಡ್ಕ ಪದವು ಇದರ ವತಿಯಿಂದ ಸಜೀಪನಡು ಕಂಚಿನಡ್ಕ ಪದವಿನಲ್ಲಿ ನಡೆದ ಹಿಂದೂ ರುದ್ರಭೂಮಿ ಲೋಕಾರ್ಪಣ ಸಮಾರಂಭದ ಸಭಾ ಕಾರ್ಯಕ್ರಮದದಲ್ಲಿ ಭಾಗವಹಿಸಿ ಮಾತನಾಡಿದರು. ಮುಂಬೈ ಉದ್ಯಮಿ ರೋಹಿತ್ ಶೆಟ್ಟಿ ನಗ್ರಿಗುತ್ತು ಸೇವಾ ವಾಹನ ಲೋಕಾರ್ಪಣೆ ಮಾಡಿದರು. ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪಿತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿ.ಪಂ.ಮಾಜಿ ಸದಸ್ಯ ಎಸ್.ಅಬ್ಬಾಸ್, ತಾ.ಪಂ.ಸದಸ್ಯೆ ಸವಿತಾ ಹೇಮಂತ್ ಕರ್ಕೇರಾ, ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ನಾಸೀರ್, ಪ್ರಗತಿಪರ ಕೃಷಿಕ ಮಹಾಬಲ ರೈ ಬರ್ಕೆಗುತ್ತು, ಶ್ರೀ ಕ್ಷೇ. ಧ ಗ್ರಾ. ಯೋ. ಮುಡಿಪು ವಲಯ ಮೇಲ್ವಿಚಾರಕ ಶಶಿಧರ್, ಜಯಕರ್ನಟಕ ಜಿಲ್ಲಾಧ್ಯಕ್ಷ ಶ್ರೀಕಾಂತ ಶೆಟ್ಟಿ ಹಾಜರಿದ್ದರು.

By Suddi9

Leave a Reply

Your email address will not be published. Required fields are marked *