ಬಂಟ್ವಾಳ: ಕಲ್ಲಡ್ಕದಲ್ಲಿ ಮೇ 26ರಂದು ನಡೆದ ಘಟನೆಯ ನೈಜ ಆರೋಪಿಗಳನ್ನು ಬಂದಿಸಬೇಕು. ಕಾನೂನಿನ ಅಡಿಯಲ್ಲಿ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗಬೇಕು. ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲಿ ಇಲ್ಲದಂತಹ ಯುವಕರ ಮೇಲೆ ಆರೋಪಿಸುವುದು, ಅವರ ಹೆಸರನ್ನು ಪ್ರಕರಣದಲ್ಲಿ ಸೇರಿಸುವ ಮೂಲಕ ನಿಜವಾದ ದುಷ್ಕರ್ಮಿಗಳು ನುಣುಚಿಕೊಳ್ಳುವಂತಾಗಬಾರದು ಎಂದು ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಘಟನೆಯ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರು ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿರುವುದು ಸರಿಯಲ್ಲ. ಇದು ಖಂಡನೀಯ. ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಇಂತಹ ಹೇಳಿಕೆ ನೀಡಿ ಸಚಿವರ ಹೆಸರಿಗೆ ಕಳಂಕ ತರುವ ಕೆಲಸ ಆಗಬಾರದು. ತಪ್ಪಿತಸ್ಥ ಆರೋಪಿಗಳನ್ನು ಶೀಘ್ರ ಬಂಧನ ಆಗಬೇಕು ಎಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

By Suddi9

Leave a Reply

Your email address will not be published. Required fields are marked *