ಬಂಟ್ವಾಳ : ನರಿಕೊಂಬು ಗ್ರಾಮದ ನಿನ್ನಿಪಡ್ಪು ಶ್ರೀ ಆದಿಮೊಗೇರ್ಕಳ ದೈವಸ್ಥಾನದ ಅಭಿವೃದ್ಧಿಗೆ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಿಂದ ಮಂಜೂರುಗೊಂಡ ರೂ.1.25 ಲಕ್ಷ ಮೊತ್ತದ ಚೆಕ್ಕನ್ನು ದ.ಕ.ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ನರಿಕೊಂಬು ವಲಯ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ಬೋಳಂತೂರು, ಬಂಟ್ವಾಳ ಆರಾದನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ದೈವಸ್ಥಾನ ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ನಾಟಿಬೀದಿ, ಮೋನಪ್ಪ ನಿನ್ನಿಪಡ್ಪು, , ಚಂದ್ರಹಾಸ ಶಂಕರಕೋಡಿ ಮುಂತಾದವರು ಉಪಸ್ಥಿತರಿದ್ದರು.
