ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ದಡ್ಡಲಕಾಡು ಸ.ಹಿ.ಪ್ರಾ. ಶಾಲೆಯಲ್ಲಿ ಶುಕ್ರವಾರ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿವಿಧ ಜಾತಿಯ ಗಿಡ ನಾಟಿ ಹಾಗೂ ಸೀಡ್ ಬಾಲ್‍ಗಳ ಬಿತ್ತನೆ ಕಾರ್ಯಕ್ರಮ ಈ ಸಂದರ್ಭ ನಡೆಯಿತು. ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಪ್ರಮುಖರಾದ ಪೂವಪ್ಪ ಮೆಂಡನ್, ರಾಮಚಂದ್ರ ಕರೆಂಕಿ, ಪುರುಷೋತ್ತಮ ಅಂಚನ್, ಮುಖ್ಯ ಶಿಕ್ಷಕ ಮೌರೀಸ್ ಡಿಸೋಜಾ, ಸಹಶಿಕ್ಷಕಿ ಹಿಲ್ಡಾ ಫೆನಾಂಡೀಸ್, ವಸಂತಗೌಡ ಹಳೇಗೇಟು, ಭುವನೇಶ್ ಗೌಡ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಶಿಕ್ಷಕರು ಹಾಜರಿದ್ದರು.
BTW_JUNE9_7

By Suddi9

Leave a Reply

Your email address will not be published. Required fields are marked *