ಬಂಟ್ವಾಳ : ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕರಾದ ಎ.ಸಿ.ದಿವಾಕರ್ ರವರು ಬಂಟ್ವಾಳ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಹಾಗೂ ರಾಜ್ಯ ಬ್ಯಾಂಕಿನ ನಿರ್ದೇಶಕರಾದ ಸುದರ್ಶನ್ ಜೈನ್ ಸನ್ಮಾನಿಸಿದರು.
ಬ್ಯಾಂಕಿನ ವ್ಯವಸ್ಥಾಪಕ ಎಂ.ಶೇಖರ್, ಪಂ.ಸದಸ್ಯ ಮಧುಸೂದನ್ ಶೆಣೈ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.
