ಬಂಟ್ವಾಳ:. ಬೆಂಜನಪದವಿನಲ್ಲಿ ಜೂ. 21 ರಂದು ರಿಕ್ಷಾ ಚಾಲಕ ಅಶ್ರಫ್ ಅವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶ್ವಿಯಾಗಿದ್ದಾರೆ. ಬಂಧಿತರನ್ನು ಅಭಿನ್, ದಿವ್ಯರಾಜ್, ಪವನ್, ಸಂತೋಷ್ ಹಾಗೂ ಶಿವ ಪ್ರಸಾದ್ ಎಂದು ಹೆಸರಿಸಲಾಗಿದ್ದು, ಹೆಚ್ಚಿನ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.ಬಂಧಿತರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವ ನಿರೀಕ್ಷೆ ಇದೆ.ಐಜಿಪಿ ಹರಿಶೇಖರನ್ನ ನೇತ್ರತ್ವದಲ್ಲಿ ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಲಾಗಿತ್ತು.

By suddi9

Leave a Reply

Your email address will not be published. Required fields are marked *