ಮುತ್ತೂರು: ಸರ್ಕಾರಿ ಪದವಿಪೂರ್ವ ಕಾಲೇಜು ಮುತ್ತೂರಿನ ಈ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳ ಸ್ವಾಗತ ಸಮಾರಂಭ, ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಇತ್ತೀಚೆಗೆ ನಡೆಯಿತು.ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳನ್ನು ಸಾಂಪ್ರದಾಯಿಕವಾಗಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಸ್ವಾಗತಿಸಿದರು.
ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಈ ಸಂದರ್ಭ 2016-17ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾದ ಕು.ಹರ್ಷಿತಾ ಮತ್ತು ಕು.ಶ್ರೀಲತಾ ರವರನ್ನು ಸನ್ಮಾನಿಸಲಾಯಿತು. ಗಣಿತ ಉಪನ್ಯಾಸಕ ಶ್ರೀ ಯೋಗೀಶ್ ರವರನ್ನು ಗೌರವಿಸಲಾಯಿತು. 100% ಫಲಿತಾಂಶ ತಂದುಕೊಟ್ಟ ಉಪನ್ಯಾಸಕರನ್ನು ಅಭಿನಂದಿಸಲಾಯಿತು.
ತಾಲೂಕು ಪಂಚಾಯತ್ ಸದಸ್ಯ ಶ್ರೀ ನಾಗೇಶ್ ಶೆಟ್ಟಿ, ಎಸ್.ಡಿ.ಎಂ.ಸಿ.ಅಧ್ಯಕ್ಷ ಶ್ರೀ ಚಂದ್ರಹಾಸ ಶೆಟ್ಟಿ, ಶ್ರೀ ಯೋಗೀಶ್, ಶ್ರೀಮತಿ ಶ್ವೇತಾ ಕೆ.ಎಂ. ಹಾಗೂ ಶ್ರೀಮತಿ ಪ್ರಮೀಳಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಪ್ರಾಂಶುಪಾಲ ಶ್ರೀ ನಿರಂಜನ್ ಎ. ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಶ್ರೀಮತಿ ರಂಜಿತಾ ಪೋಷಕರಿಗೆ ಸಲಹೆಸೂಚನೆಗಳನ್ನು ನೀಡಿದರು.ಉಪನ್ಯಾಸಕಿ ಕು. ಅಮೃತಾ, ಅತಿಥಿ ಉಪನ್ಯಾಸಕರನ್ನು ಪರಿಚಯಿಸಿದರು.ಕು.ಸುರೆಹಾನ ನಿರ್ವಹಿಸಿದ ಈ ಕಾರ್ಯಕ್ರಮದಲ್ಲಿ ಕು.ಆಯಿಷಾ ಸ್ವಾಗತಿಸಿ, ಮಾ.ಗುರುಕಿರಣ್ ವಂದಿಸಿದರು.
