ಬಂಟ್ವಾಳ:ತಾಲ್ಲೂಕಿನ ಬಡಗಬೆಳ್ಳೂರು ಗ್ರಾಮದ ಸೈಟ್ ಎಂಬಲ್ಲಿ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕರೊಬ್ಬರು ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಯೋಗೀಶ ಪೂಜಾರಿ (38) ಎಂದು ಗುರುತಿಸಲಾಗಿದೆ. ಇಲ್ಲಿನ ನಿವಾಸಿ ಪುರುಷೋತ್ತಮ ಗಟ್ಟಿ ಎಂಬವರ ಅಡಿಕೆ ತೋಟಕ್ಕೆ ಎಂದಿನಂತೆ ಗುರುವಾರ ಕೂಲಿ ಕಾರ್ಮಿಕರಾಗಿ ಹೋಗಿದ್ದ ಯೋಗೀಶ ಪೂಜಾರಿ ಅವರು ಮಧ್ಯಾಹ್ನ ಸುಮಾರು 3 ಗಂಟೆಗೆ ತೋಟದ ನಡುವೆ ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ಅಲ್ಲೇ ಸಾವನ್ನಪ್ಪಿದ್ದರು. ಮೃತರಿಗೆ ಪತ್ನಿ ಮತ್ತು ನಾಲ್ವರು ಪುತ್ರರು ಇದ್ದಾರೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *