ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್,ಇವರ ಆರೋಗ್ಯಸ್ಥಿತಿ ಇನ್ನೂ ಗಂಭೀರವಾಗಿದ್ದು, ಘಟನೆ ನಡೆದು 2 ದಿನಗಳೇ ಸಂದರೂ ಆರೋಪಿಗಳ ಬಂಧನವಾಗಿಲ್ಲವೆಂದು ಆರೋಪಿಸಿ ಹಿಂದೂಪರ ಸಂಘಟನೆಗಳು ನಾಳೆ ಬೆಳಿಗ್ಗೆ 10 ಘಂಟೆಗೆ ಬಿ.ಸಿ ರೋಡ್ ತಾಲ್ಲೂಕು ಕಛೇರಿ ಮುಂಭಾಗ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
