ಬಂಟ್ವಾಳ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಶರತ್ ರವರ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್  ಶನಿವಾರ ರಾತ್ರಿ ಬೇಟಿ ನೀಡಿ ಮನೆ ಮಂದಿಗೆ ಸಾಂತ್ವಾನ ಹಾಗೂ ಧೈರ್ಯ ತುಂಬಿದರು
ಈ ವೇಳೆ ಮಾಧ್ಯಮದ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಇಂತಹ ಘಟನೆಗಳಿಗೆ ರಾಜ್ಯ ಸರಕಾರವೇ ನೇರ ಹೊಣೆ. ಸರಕಾರ ಪ್ರತಿಭಟನೆ ನಡೆಸಿದ ನಮ್ಮ ಮೇಲೆ ಕೇಸು ದಾಖಲಿಸುತ್ತದೆ ಆದರೆ ಕೊಲೆ, ಹಲ್ಲೆಯಂತಹ ಕೃತ್ಯಗಳ ಆರೋಪಿಗಳನ್ನು,ಸಮಾಜಘಾತುಕ ಶಕ್ತಿಗಳನ್ನು ಬಂಧಿಸುವಲ್ಲಿ ವಿಫಲವಾಗಿದೆ. ತಕ್ಷಣ ಆರೋಪಿ ಗಳನ್ನು ಬಂಧಿಸಿ ಮತ್ತು ಶರತ್ ರವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದರು.
IMG-20170709-WA0035
ಈ ಸಂಧರ್ಭದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ , ಬಿಜೆಪಿ ಕೈಗಾರಿಕಾ ಪ್ರಕೋಷ್ಟ ಪ್ರಮುಖರಾದ ಬದರೀನಾಥ ಕಾಮತ್  ಶರತ್ ರವರ ತಂದೆ ತನಿಯಪ್ಪ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *