ಬಂಟ್ವಾಳ: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಪ್ರತಿಭಾನ್ವಿತೆ ಕು| ಕಾವ್ಯ ನಿಗೂಢ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ಒತ್ತಾಯಿಸಿ ಬಂಟ್ವಾಳ ಯುವವಾಹಿನಿ ಸದಸ್ಯರು ತೋಳಿಗೆ ಕಪ್ಪುಪಟ್ಟಿ ಧರಿಸಿ ಬಂಟ್ವಾಳ ತಹಶೀಲ್ದಾರರಿಗೆ ಸೋಮವಾರ ಮನವಿ ಸಲ್ಲಿಸಿದರು.
ಕಾವ್ಯಳ ಸಾವು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ.ಆದ್ದರಿಂದ ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು. ಒಂದು ವೇಳೆ ಸೂಕ್ತವಾದ ತನಿಖೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ ಸುವರ್ಣ ಅಲೆತ್ತೂರು, ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿ ಲೋಕೇಶ್ ಪೂಜಾರಿ ಪಿ.ಜೆ., ಸಲಹೆಗಾರರಾದ ಬಿ, ತಮ್ಮಯ, ಮಾಜಿ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ, ಬಿ. ಶ್ರೀಧರ್ ಅಮೀನ್, ರಾಜೇಶ್ ಸುವರ್ಣ, ರಾಮಚಂದ್ರ ಸುವರ್ಣ, ಪ್ರೇಮನಾಥ ಕೆ., ಬಿಲ್ಲವ ಮುಖಂಡರಾದ ಬಿ. ವಿಶ್ವನಾಥ, ನೋಣಯ್ಯ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಸಾಮಾಜಿಕ ಕಾರ್ಯಕರ್ತರಾದ ಪ್ರಭಾಕರ ದೈವಗುಡ್ಡೆ ಮತ್ತಿತರರಿದ್ದರು. 
