ಮಂಗಳೂರು: ಇತ್ತಿಚೆಗೆ ಮೂಡಬಿದಿರೆಯ ಆಳ್ವಾಸ್ ಶಾಲೆಯ ಕ್ರೀಡಾ ಹಾಸ್ಟೆಲ್ನಲ್ಲಿ ಅಸಹಜವಾಗಿ ಸಾವನ್ನಪ್ಪಿದ ಕುಮಾರಿ ಕಾವ್ಯಾಳ ಸಾವಿನ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಾಣಾ ವೇದಿಕೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. 

ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಇಂತಹಾ ಹಲವು ಪ್ರಕರಣಗಳು ಈ ಹಿಂದೆ ನಡೆದಿದ್ದರೂ ಸಹಾ ಅದನ್ನು ಬೆಳಕಿಗೆ ತಾರದೆ ಅಲ್ಲೇ ಮುಚ್ಚಿ ಹಾಕಲಾಗುತ್ತಿತು ಆ ಎಲ್ಲಾ ಪ್ರಕರಣಗಳ ತನಿಖೆಯನ್ನು ಸಹಾ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
