ಬಂಟ್ವಾಳ ತಾಲೂಕಿನಾದ್ಯಂತ ಮಳೆಯ ಆರ್ಭಟ ಜೋರಾಗಿದೆ. ಕಳೆದ 18 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ನೇತ್ರಾವತಿ ನದಿಯಲ್ಲಿ ನೀರಿನಮಟ್ಟ 4.5 ಮೀಟರ್‌ಗೆ ಏರಿಕೆಯಾಗಿದ್ದು, ಪೆರಾಜೆ ಗ್ರಾಮದಲ್ಲಿನ ರಸ್ತೆಯೊಂದು ಬಂದ್ ಆಗಿದೆ. ಇನ್ನು ಇಲ್ಲಿನ ಪಾರ್ಪಕಜೆ ರಸ್ತೆಯ ಮೇಲೆ ನೀರು ರಭಸದಿಂದ ಹರಿಯುತ್ತಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆಕಳೆದ ಹಲವು ವರ್ಷಗಳಿಂದ ಇಲ್ಲಿ ಸೇತುವೆ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇದ್ದರೂ ಸ್ಥಳೀಯ ಜನಪ್ರತಿನಿಧಿಗಳು ಇತ್ತ ಗಮನಹರಿಸಿಲ್ಲ. ತಾಲೂಕಿನ ಕೊಳ್ನಾಡು ಗ್ರಾಮದಲ್ಲಿಯೂ ರಾತ್ರಿ ಸುರಿದ ಮಳೆಗೆ ಮರಬಿದ್ದ ಪರಿಣಾಮ ವಿದ್ಯುತ್ ಕಂಬವೊಂದು ಧರೆಗೆ ಉರುಳಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವೂ ಅಸ್ತವ್ಯಸ್ತವಾಗಿತ್ತು.ಮೆಸ್ಕಾಂ ಹಾಗೂ ಸ್ಥಳೀಯ ಪಂಚಾಯತ್ ಅಧಿಕಾರಿಗಳು ವಿದ್ಯುತ್ ಕಂಬ ಹಾಗೂ ಮರವನ್ನು ತೆರವುಗೊಳಿಸಿದರು.

By suddi9

Leave a Reply

Your email address will not be published. Required fields are marked *