ಬಂಟ್ವಾಳ : ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರ ಸಮಾವೇಶ ಮಂಗಳವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಸದಸ್ಯರು ಪೋಷಕರೊಂದಿಗೆ ಸುತ್ತು ಬೈಠಕ್ ನಡೆಸಿ ಚರ್ಚೆ ನಡೆಸಿದರು. ನಂತರ ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆದ ಸಭೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ಅವರು ಮಾತನಾಡಿ ನಮ್ಮ ಮಾತೃಭಾಷೆಯಿಂದ ಮಾತ್ರ ಹಿರಿಯರನ್ನು ಗೌರವಿಸುವ ಗುಣ ಬರುತ್ತದೆ. ಶಾಲೆಯಲ್ಲಿ ಮಕ್ಕಳು ಪಡೆದ ಸಂಸ್ಕಾರ ಮನೆಯಲ್ಲಿಯು ಮುಂದುವರಿಯಬೇಕು ಎಂದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ಕಾರ್ಯಚಟುವಟಿಕೆಗಳ ಬಗ್ಗೆ ಉತ್ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪೋಷಕರನ್ನು ರಕ್ಷೆ ಇಟ್ಟು ತಿಲಕವಿಟ್ಟು ಸ್ವಾಗತಿಸಲಾಯಿತು.

IMG_0580
ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಅಧ್ಯಕ್ಷ ನಾರಾಯಣ ಸೋಮಯಜಿ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಗಿರಿ ಸತೀಶ್ ಭಟ್, ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *