ಬಂಟ್ವಾಳ : ತಾಲ್ಲೂಕಿನ ನೈನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ‘ಬಯಲು ಬಹಿರ್ದೆಸೆಯಿಂದ ಮುಕ್ತ ಸ್ವಾತಂತ್ರ್ಯ ಮತ್ತು ಸ್ವಚ್ಛತಾ ಸಪ್ತಾಹ ಸಮಾರೋಪ ಕಾರ್ಯಕ್ರಮವನ್ನು ಸ್ಥಳೀಯ ತಾಲ್ಲೂಕು ಪಂಚಾಯಿತಿ ಸದಸ್ಯ ರಮೇಶ ಕುಡ್ಮೇರು ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಉಪಾಧ್ಯಕ್ಷೆ ಲಕ್ಷ್ಮಿ ಜೆ.ಬಂಗೇರ, ಮಾಜಿ ಅಧ್ಯಕ್ಷ ನಾರಾಯಣ ಶೆಟ್ಟಿ, ಪಿಡಿಒ ಬಾಲಕೃಷ್ಣ ಪೂಜಾರಿ, ಉದ್ಯಮಿ ಹರೀಂದ್ರ ಪೈ, ಮುಖ್ಯಶಿಕ್ಷಕ ಅಶೋಕ್ ಕುಮಾರ್, ಶ್ರೀರಾಮ ಯುವಕ ಸಂಘದ ಅಧ್ಯಕ್ಷ ಹರೀಶ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಪೂಜಾರಿ ಮತ್ತಿತರರು ಇದ್ದರು. 
