ಪ್ರಶಸ್ತಿ ವಿಜೇತ ಯುವಕ ಮಂಡಲ ವಿಟ್ಲ ಇದರ 40 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಮೊಸರು ಕುಡಿಕೆ ಉತ್ಸವದ ಉದ್ಘಾಟನೆಯನ್ನು ವಿಟ್ಲ ಆರಕ್ಷಕ ಠಾಣೆಯ ಉಪನಿರೀಕ್ಷಕ ಹೆಚ್ ಇ ನಾಗರಾಜ ಮಾಡಿದರು. ಮುಖ್ಯ ಅತಿಥಿಗಳಾಗಿ ದೇಜಪ್ಪ ಪೂಜಾರಿ ನಿಡ್ಯ ಮತ್ತು ಸುಬಾಸ್ಚಂದ್ರ ನಾಯಕ್ ಭಾಗವಹಿಸಿದ್ದರು. ಯುವಕ ಮಂಡಲದ ಅಧ್ಯಕ್ಷ ಸದಾನಂದ ಗೌಡ ಸೇರಾಜೆ ಸ್ವಾಗತಿಸಿದರು. ಕಾರ್ಯದರ್ಶಿ ಜನಾರ್ಧನ ಪದ್ಮಶಾಲಿ ವಂದಿಸಿದರು ಗೌರವಾಧ್ಯಕ್ಷ ಸುದರ್ಶನ ಪಡಿಯಾರ್ ಕಾರ್ಯಕ್ರಮ ನಿರೂಪಿಸಿದರು.
