ಬೆಂಗಳೂರು: ದ್ವೇಷ ರಾಜಕಾರಣಕದ ಬಂಡತನ ತೋರಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ನಾಡಿನಾದ್ಯಂತ ವ್ಯಾಪಕ ಆಕ್ರೋಶ/ ಟೀಕೆಗಳು ಕೇಳಿಬಂದಿದೆ.ತಮ್ಮ ನಾಯಕ ಯಡಿಯೂರಪ್ಪ ವಿರುದ್ಧ ಇಲ್ಲಸಲ್ಲದ ಕೇಸು ಜಡಿಯಲು ಕುತಂತ್ರ ರೂಪಿಸಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ರೊಚ್ಚಿಗೆದ್ದಿದ್ದಾರೆ.
ರಾಜ್ಯದಲ್ಲಿ ಸಿದ್ದು ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಕುತಂತ್ರ ರಾಜಕಾರಣದಲ್ಲಿ ತೊಡಗಿದೆ. ಪ್ರತಿಪಕ್ಷ ನಾಯಕರನ್ನು ಸದ್ದಿಲ್ಲದೆ ರಾಜಕೀಯವಾಗಿ ಮುಗಿಸಲು ಹುನ್ನಾರ ನಡೆಸಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು ಸಿದ್ದು ಸರ್ಕಾರವನ್ನು ತಕ್ಷಣ ವಜಾಗೊಳಿಸಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕೆಂದು ರಾಜ್ಯಪಾಲ ವಜುಭಾಯ್ ವಾಲಾರಿಗೆ ಮನವಿ ಸಲ್ಲಿಸಿದ್ದಾರೆ.
