ಮಂಗಳೂರು: ಮಡಿಕೇರಿಯ ಮಾಜಿ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ.ರಮೇಶ್ ಅವರು ವೇದಿಕೆಯ ಮೇಲೆ ಮಹಿಳೆಯ ಕೈ ಸವರಿದ ಪ್ರಕರಣದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.protest

ಈ ಸಂಬಂಧ ಮಂಗಳೂರಲ್ಲಿಂದು ರಮೇಶ್ ಅಸಭ್ಯ ವರ್ತನೆಯನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾ ಕಛೇರಿ ಮುಂದೆ ಪ್ರತಿಭಟನೆ ಮಾಡಿದರು. ಈ ವೇಳೆ ಮಾಜಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರೇಷ್ಮೆ ಮಂಡಳಿಯ ಅಧ್ಯಕ್ಷ ಟಿ.ಪಿ ರಮೇಶ್‌ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಬಿ.ಜೆ.ಪಿ ಜಿಲ್ಲಾ ಅಧ್ಯಕ್ಷ ಸಂಜೀವ ಮಠಂದೂರು, ಮೊನಪ್ಪ ಭಂಡಾರಿ, ಮಹಿಳಾ ಮೋರ್ಚಾ ಅಧ್ಯಕ್ಷ ಪೂಜಾ ಪೈ , ರಾಜ್ಯ ಮಹಿಳಾ ಅಧ್ಯಕ್ಷ ಭಾರತಿ ಶೆಟ್ಟಿ ಹಾಗೂ ಸುಲೋಚನ ಭಟ್ ಹಾಗೂ ಇನ್ನಿತರ ಮಹಿಳಾ ಕಾರ್ಯಕರ್ತರು ಭಾಗಿಯಾಗಿದ್ದರು

By suddi9

Leave a Reply

Your email address will not be published. Required fields are marked *